ಇಂದಬೆಟ್ಟು ಗ್ರಾಮ ಸಭೆ

0

ಇಂದಬೆಟ್ಟು : ಇಂದಬೆಟ್ಟು ಗ್ರಾಮ ಪಂಚಾಯತಿನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಮಾ 7 ರಂದು ಇಂದಬೆಟ್ಟು ಸಬಾಂಗಣದಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್ ಕ್ಷೇತ್ರ ಶಿಕ್ಷಣಾಧಿಕಾರಿಯವರ ಮಾರ್ಗದರ್ಶನದಲ್ಲಿ ನಡೆಯಿತು.

ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಸಹಾಯಕ ಕಾರ್ಯಪಾಲಕ ಅಭಿಯಂತರರು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಮತ್ತು ಆಡಳಿತಾಧಿಕಾರಿ ಜನಾರ್ಧನ ಕೆ ವಹಿಸಿದ್ದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ ಪಿ, ಸ್ವಾಗತಿಸಿ, ಕಾರ್ಯದರ್ಶಿ ಗಿರಿಯಪ್ಪ ಗೌಡ, ಬಿ. ಅನುಪಾಲನ ವರದಿಯನ್ನು ಪ್ರಸ್ಥಪಿಸಿದರು, ನಿಕಟಪೂರ್ವ ಅಧ್ಯಕ್ಷೆ ಆಶಾಲತಾ, ಹಾಗೂ ನಿಕಟಪೂರ್ವ ಸದಸ್ಯರು,ಗ್ರಾಮ ಪಂಚಾಯತ್ ಸಿಬ್ಬಂದಿಗಳು,ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here