







ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ಗ್ರಾಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ, ಗ್ರಾಮ ಪಂಚಾಯತ್ ಅರಸಿನಮಕ್ಕಿ ಹಾಗೂ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ ಅರಸಿನಮಕ್ಕಿ ಇವರ ಸಂಯುಕ್ತ ಆಶ್ರಯದಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವು ಮಾ.10 ರಂದು ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಬಿಂದು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯ ಕೃಷಿ ಅಧಿಕಾರಿ ಗಣೇಶ್ ಅಡಿಗ, NRLM ಕೊಕ್ಕಡ ವಲಯ ಮೇಲ್ವಿಚಾರಕಿ ವೀಣಾಶ್ರೀ, ಅರಸಿನಮಕ್ಕಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಧೀರ್ M.S, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯ್ಕ್, ನೆರಿಯ ಪಶು ವೈದ್ಯಾಧಿಕಾರಿ ಡಾ. ಯತೀಶ್ ಉಪಸ್ಥಿತರಿದ್ದರು.ರಾಘವೇಂದ್ರ ನಾಯ್ಕ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಬಳಿಕ ಕೃಷಿ ಅಧಿಕಾರಿ ಗಣೇಶ್ ಅಡಿಗ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ಹಾಗೂ ಕೃಷಿ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.NRLM ವಲಯ ಮೇಲ್ವಿಚಾರಕಿ ವೀಣಾಶ್ರೀ ಸಂಜೀವಿನಿ ಮೂಲಕ ಸ್ವ ಉದ್ಯೋಗ ಆರಂಭಿಸಲು CIF ಲೋನ್, ಬ್ಯಾಂಕ್ ಲೋನ್ ಸೇರಿದಂತೆ ಕೇಂದ್ರ ಸರ್ಕಾರದಿಂದ ದೊರೆಯುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ, ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀರ್ M.S ಮಹಿಳೆಯರು ಸ್ವಾವಲಂಬಿಗಳಾಗಲು ಸರ್ಕಾರದ ವಿವಿಧ ಯೋಜನೆಗಳು ಮತ್ತು ತರಬೇತಿಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನೆರಿಯ ಪಶು ವೈದ್ಯಾಧಿಕಾರಿ ಡಾ. ಯತೀಶ್ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ಕುರಿತು ಸುಮಾರು ಎರಡು ಗಂಟೆಗಳ ಕಾಲ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ LCRP ಅಮಿತ, BC ಸಖಿ ರೇವತಿ, ಕೃಷಿ ಸಖಿ ಹರೀನಾಕ್ಷಿ, ಒಕ್ಕೂಟದ ಕಾರ್ಯದರ್ಶಿ, ಉಪಾಧ್ಯಕ್ಷರು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಶಿಶಿಲದ LCRP, ಕೃಷಿ ಸಖಿಯರು ಹಾಗೂ ಸದಸ್ಯರು ಉಪಸ್ಥಿತರಿದ್ದರು.ಮೋಹಿನಿ ಪ್ರಾರ್ಥನೆ ಸಲ್ಲಿಸಿದರು. LCRP ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. MBK ನೀತಾ ಸ್ವಾಗತಿಸಿದರು. ಪಶು ಸಖಿ ವೇದಾವತಿ ಧನ್ಯವಾದ ಸಲ್ಲಿಸಿದರು.









