






ಬೆಳಾಲು : ಯಕ್ಷಾಭಿಮಾನಿ ಬಳಗ ಬೆಳಾಲು ಇದರ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಮಾ. 15 ರಂದು ಸಂಜೆ ಬೆಳಾಲು ಶ್ರೀ ಸರಸ್ವತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಗಂಟೆ 6 ರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.



ಇದರ ಅಂಗವಾಗಿ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.









