ವೃತ್ತಿ ಮಾರ್ಗದ ದಿಕ್ಕುಸೂಚಿ – ಆಯ್ಕೆಗಳು, ಸವಾಲುಗಳು ಮತ್ತು ಅವಕಾಶಗಳ ಅರಿವು ಮೂಡಿಸುವ ಕಾರ್ಯಕ್ರಮ

0

ಸೇಕ್ರೇಡ್ ಹಾರ್ಟ್ ಕಾಲೇಜು, ಮಡಂತ್ಯಾರಿನ ಹಿರಿಯ ವಿದ್ಯಾರ್ಥಿ ಸಂಘ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ “ವೃತ್ತಿ ಮಾರ್ಗದ ದಿಕ್ಕುಸೂಚಿ – ಆಯ್ಕೆಗಳು, ಸವಾಲುಗಳು ಮತ್ತು ಅವಕಾಶಗಳ ಅರಿವು” ಮೂಡಿಸುವ ಕಾರ್ಯಕ್ರಮ ಎಂಬ ವಿಷಯದ ಮೇಲೆ ಮಾರ್ಚ್ 12 ರಂದು ಕಾಲೇಜಿನ ಆಡಿಯಟೋರಿಯಂ ನಲ್ಲಿ ಸಂಪನ್ಮೂಲ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ವಾಣಿಜ್ಯ ವಿಭಾಗದ ಉಪನ್ಯಾಸಕ ರಾಬಿನ್ ಸೆರಾ ಅವರು ಸ್ವಾಗತ ಕೋರಿ ಮುಖ್ಯ ಭಾಷಣಕಾರರನ್ನು ಸಭೆಗೆ ಪರಿಚಯಿಸಿದರು. ಅವರು ಭಾಷಣಕಾರರ ಸಾಧನೆಗಳನ್ನು ವಿವರಿಸಿ, ಸಂಸ್ಥೆಯ ಹಳೆಯ ವಿದ್ಯಾರ್ಥಿಯೇ ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿರುವುದು ಸಂತೋಷದ ವಿಷಯವೆಂದು ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದವರು ಡಾ. ಪೌಲ್ ಡಿಸೋಜಾ, ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯ, ಮಂಗಳೂರು ಇದರ ವಾಣಿಜ್ಯ, ಹಣಕಾಸು ಮತ್ತು ಲೆಕ್ಕಪತ್ರ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಸೇಕ್ರೇಡ್ ಹಾರ್ಟ್ ಕಾಲೇಜಿನ ಹೆಮ್ಮೆಯ ಹಳೆಯ ವಿದ್ಯಾರ್ಥಿ. ತಮ್ಮ ಉಪನ್ಯಾಸದಲ್ಲಿ ಅವರು ವಿದ್ಯಾರ್ಥಿಗಳಿಗೆ ವೃತ್ತಿಜೀವನದಲ್ಲಿ ಸರಿಯಾದ ಆಯ್ಕೆಗಳನ್ನು ಮಾಡುವುದು, ಎದುರಾಗುವ ಸವಾಲುಗಳನ್ನು ಎದುರಿಸುವುದು ಮತ್ತು ಅವಕಾಶಗಳನ್ನು ಗುರುತಿಸುವುದು ಹೇಗೆ ಎಂಬುದರ ಕುರಿತು ಮಾರ್ಗದರ್ಶನ ನೀಡಿದರು. ಅವರ ಉಪನ್ಯಾಸ ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತ ಮತ್ತು ಪ್ರೇರಣಾದಾಯಕವಾಗಿತ್ತು.

ಈ ಸಂದರ್ಭದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಈಶ್ವರ ಗೌಡ ಅವರು ಸಂಪನ್ಮೂಲ ವ್ಯಕ್ತಿಯ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು. ಡಾ. ಪೌಲ್ ಡಿಸೋಜಾ ತಮ್ಮ ವಿದ್ಯಾರ್ಥಿಯಾಗಿದ್ದ ಸಂದರ್ಭವನ್ನು ನೆನಪಿಸಿಕೊಂಡು, ಅವರು ಇಂದು ಯಶಸ್ವಿಯಾದ ಅಧ್ಯಾಪಕರಾಗಿ ಬೆಳೆಯುತ್ತಿರುವುದನ್ನು ಕಂಡು ಸಂತೋಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ವಿಲ್ಸನ್ ರೂಪೇಶ್ ಮೊರಾಸ್ ಹಾಗೂ ಕಾರ್ಯದರ್ಶಿ ರೋಜಿಟಾ ಸೆರಾ ಉಪಸ್ಥಿತರಿದ್ದರು. ಜೊತೆಗೆ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಕಾಶ್ ಡಿಸೋಜಾ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಪ್ರಕಾಶ್ ಕ್ರಮಧಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ನಿರ್ದೇಶಕ ನೆಲ್ಸನ್ ಮೊನಿಸ್ ಅವರು ವಂದನಾರ್ಪಣೆ ಸಲ್ಲಿಸಿದರು.

LEAVE A REPLY

Please enter your comment!
Please enter your name here