






ಕುಕ್ಕೇಡಿ : ಕುಕ್ಕೇಡಿ ಗ್ರಾಮ ಪಂಚಾಯತಿನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಮಾ.16 ರಂದು ಆಡಳಿತಾಧಿಕಾರಿ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲ ಅಭಿಯಂತರ ಬಕ್ಕಪ್ಪ ಹೆಚ್. ಅಧ್ಯಕ್ಷತೆಯಲ್ಲಿ ನಡೆಯಿತು.


ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಗ್ರಾಮ ಸಭೆಯನ್ನು ಮುನ್ನಡೆಸಿದರು.ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಜಿ. ಪ. ಮಾಜಿ ಸದಸ್ಯ ಶೇಖರ ಕುಕ್ಕೇಡಿ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಸಖಿ, ಕೃಷಿ ಸಖಿಯರು,ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಕುಂಝ ಕೆ. ವರದಿ, ಲೆಕ್ಕಪತ್ರ, ಅನುಪಾಲನಾ ವರದಿ ಮತ್ತು ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆ ಗಳ ವಿವರ ನೀಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.









