






ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೈಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕುಮಾರಿ ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕಿತಾ ಶೆಟ್ಟಿ ಮಹಿಳಾ ದಿನಾಚರಣೆಯ ಮಹತ್ವ ಹಾಗೂ ಪ್ರಸ್ತುತ ಕೇಂದ್ರ ಸರಕಾರದಿಂದ ಮಹಿಳಾ ಕ್ರೀಡಾಪಟುಗಳಿಗೆ ಕೊಡುತ್ತಿರುವ ಪ್ರೋತ್ಸಾಹ ಹಾಗೂ ಸೌಲಭ್ಯಗಳ ಬಗ್ಗೆ ಗಮನ ಸೆಳೆದರು. ಹಾಗೆಯೇ ಬೆಳ್ತಂಗಡಿ ತಾಲೂಕಿನ ಯುವ ವಕೀಲೆ ಕುಮಾರಿ ಸೌಮ್ಯ ಪಿ. ಉಪಸ್ಥಿತರಿದ್ದು, ಮಹಿಳೆಯರಿಗೆ ಕಾನೂನಿನ ಬಗ್ಗೆ ಮಾಹಿತಿಯನ್ನು ನೀಡಿದರು.


ಜಿಲ್ಲಾ ಎಸ್ ಸಿ ಮೋರ್ಚಾದ ಕಾರ್ಯದರ್ಶಿ ಚಂದ್ರಕಲಾ ಮಾತನಾಡಿ ಮಹಿಳಾ ಸಬಲೀಕರಣಕ್ಕೆ ಕೇಂದ್ರ ಸರಕಾರ ಕೊಡುತ್ತಿರುವ ಮಹತ್ವದ ಬಗ್ಗೆ ತಿಳಿಸಿದರು. ಅಂತೆಯೇ ಮಹಿಳಾ ಮೋರ್ಚಾ ಬೆಳ್ತಂಗಡಿಯ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಮಾತನಾಡಿ ,ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗುವುದರ ಜೊತೆಗೆ ತಮ್ಮ ಆರೋಗ್ಯಕ್ಕೂ ಮಹತ್ವ ಕೊಡಬೇಕು. ಈ ನಿಟ್ಟಿನಲ್ಲಿ ಸಮತೋಲನ ಆಹಾರ ಸೇವಿಸಬೇಕು. ಸಿರಿಧಾನ್ಯಕ್ಕೆ ಹೆಚ್ಚಿನ ಮಹತ್ವವನ್ನು ಕೊಡಬೇಕು ಅನ್ನುವ ವಿಚಾರದ ಬಗ್ಗೆ ಉತ್ತಮ ಮಾಹಿತಿಯನ್ನು ನೀಡಿದರು. ಸಂಘಟನಾತ್ಮಕ ಮಾಹಿತಿಯನ್ನು ನೀಡಿದರು.
ವಂದೇ ಮಾತರಂ ಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತುಳಸಿ ಉಮೇಶ್ ನಿರೂಪಿಸಿ, ಸ್ವಾಗತಿಸಿ , ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಬೆಳ್ತಂಗಡಿ ಮಂಡಲ ಮೋರ್ಚಾದ ಕಮಲಾಕ್ಷಿ, ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯದರ್ಶಿ ಆಶಾ ಸಲ್ಧಾನ ,ಪಂಚಾಯತ್ ಮಾಜಿ ಅಧ್ಯಕ್ಷರುಗಳು, ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.









