ಯೂತ್ ನ್ಯಾಷನಲ್ ವಾಲಿ ಬಾಲ್ ಚಾಂಪಿಯನ್ ಶಿಪ್ : ಎಸ್ ಡಿ ಎಂ ವಿದ್ಯಾರ್ಥಿಗಳ ಸಾಧನೆ

0

ಉಜಿರೆ, : ಓಡಿಶಾದ ಭುವನೇಶ್ವರದಲ್ಲಿ ಮಾರ್ಚ್ 15ರಿಂದ 20ರವರೆಗೆ ನಡೆದ ಪುರುಷರ ಮತ್ತು ಮಹಿಳೆಯರ 26ನೇ ಯುವ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 11 ಜನ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಉತ್ತಮ ಸಾಧನೆ ಮೆರೆದಿದ್ದಾರೆ.

ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಉಜಿರೆ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳು, ಪುರುಷ ತಂಡದಲ್ಲಿ ಕಾಲೇಜಿನ ದ್ವಿತೀಯ ಬಿ ಎ ವಿದ್ಯಾರ್ಥಿ ಸುಭಾಷ್ ರಾಜ್, ದ್ವಿತೀಯ ಬಿ ಕಾಂ ವಿದ್ಯಾರ್ಥಿ ಮಯೂರ್ ಹಾಗು ಪ್ರತೀಕ್ ಪಾಲ್ಗೊಂಡಿದ್ದರು. ಮಹಿಳೆಯರ ವಿಭಾಗದ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಲಾಸ್ಯ, ಅಪೂರ್ವ, ಸ್ಮಿತಾ, ವರ್ಷಾ , ಜೆಸ್ಲಿನ್ , ದ್ವಿತೀಯ ಬಿ ಎ ವಿದ್ಯಾರ್ಥಿನಿ ಪ್ರಿಯಾಂಕಾ, ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಇಂಚರ ಹಾಗು ತೃತೀಯ ಬಿ ಎ ವಿದ್ಯಾರ್ಥಿನಿ ಐಶ್ವರ್ಯ ಭಾಗವಹಿಸಿದ್ದರು. ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪುಜಾರಿ ತರಬೇತಿ ನೀಡಿರುತ್ತಾರೆ.

ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿಶೇಷ ಸಾಧನೆ ಮೆರೆದಿರುವ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಆಡಳಿತ ಮಂಡಳಿ ಹಾಗು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐ ಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ, ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಬಿ, ದೈಹಿಕ ಶಿಕ್ಷಣ ಉಪನ್ಯಾಸಕ ಶಾರದಾ, ಸುದೀನ್ ಪೂಜಾರಿ, ಸಂದೇಶ್ ಬಿ ಪೂಂಜ, ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here