







ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ 27ನೇ ವಾರ್ಷಿಕೋತ್ಸವವನ್ನು ಮಾ.22 ರಂದು ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯೆ ಮೇರಿ ಯು.ಪಿ.ಯವರು ನೆರವೇರಿಸಿದರು.

ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರಕಾಶ್ ಪ್ರಭು, ಮಾತನಾಡಿ ಸಿಯೋನ್ ಆಶ್ರಮದ ಕುರಿತು ತಾವೇ ರಚಿಸಿದ ಸುಂದರವಾದ ಕವಿತೆಯನ್ನು ಹಾಡಿ ವಾರ್ಷಿಕೋತ್ಸವಕ್ಕೆ ಶುಭಾಶಯಗಳನ್ನು ತಿಳಿಸಿ, ಆಶ್ರಮದ ಸೇವೆ ಶ್ಲಾಘನೀಯವಾಗಿದೆ ಎಂದು ಅಭಿಪ್ರಾಯಪಟ್ಟರು.



ಸಂಸ್ಥೆಯ ವೈದ್ಯಾಧಿಕಾರಿ ಡಾ.ಶಿವಾನಂದ ಸ್ವಾಮಿಯವರು ಸಂಸ್ಥೆಯು ಬೆಳೆದು ಬಂದ ಹಾದಿಯನ್ನು ಸಂಕ್ಷಿಪ್ತವಾಗಿ ವಿವರಿಸಿ. ಪ್ರಸ್ತುತ ಕಾರ್ಯವೈಖರಿಗಳ ಬಗ್ಗೆ ತಿಳಿಸಿದರು. ಸಂಸ್ಥೆಯ ಲೆಕ್ಕಾಧಿಕಾರಿ ಸೌಮ್ಯ ಯು.ಪಿ. ಸಂಸ್ಥೆಯ ವಾರ್ಷಿಕ ವರದಿ ವಾಚಿಸಿದರು. ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯೆ ಮೇರಿ ಯು.ಪಿ., ವೈದ್ಯಾಧಿಕಾರಿ ಡಾ. ಕಲಾಮಧು ಶೆಟ್ಟಿ, ಹಿತೈಷಿಗಳಾದ ಜೋಸೆಫ್ ಪಿ.ಪಿ., ಆಶ್ರಮದ ಫಲಾನುಭವಿಗಳಾದ ಶಶಿಧರ ಮತ್ತು ಐಶ್ವರ್ಯರವರು ಉಪಸ್ಥಿತರಿದ್ದರು.
ವಾರ್ಷಿಕೋತ್ಸವದ ಅಂಗವಾಗಿ ಆಶ್ರಮ ನಿವಾಸಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಏರ್ಪಡಿಸಲಾಗಿದ್ದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಮತ್ತು ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಶೋಭಾ ಯು.ಪಿ. ಸ್ವಾಗತಿಸಿ, ಸಿಬ್ಬಂದಿ ದಿನಾವತಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಆಶಾಸುಧಾಕರ್ ವಂದಿಸಿದರು.









