







ಉಜಿರೆ : ಸುರತ್ಕಲ್ ಗೋವಿಂದಾಸ್ ಕಾಲೇಜು , ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆ ಆಶ್ರಯದಲ್ಲಿ, 25 ನೇ ವರ್ಷದ ಅಗರಿ ಪ್ರಶಸ್ತಿ ಪ್ರದಾನ ಸಂದರ್ಭ ನಡೆದ “ಯಕ್ಷಯಾನ – 2026” ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಜಿರೆ ಎಸ್ ಡಿ ಎಮ್ ಯಕ್ಷಗಾನ ಕಲಾಕೇಂದ್ರವು “ತರಣಿಸೇನಕಾಳಗ “ಎಂಬ ಪ್ರಸಂಗವನ್ನು ಪ್ರಸ್ತುತ ಪಡಿಸಿ ಸಮಗ್ರ ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದಿರುತ್ತಾರೆ.


ಈ ಪ್ರಸಂಗದಲ್ಲಿ “ರಾವಣ ” ಪಾತ್ರಧಾರಿಯಾಗಿ ಬಣ್ಣದ ವೇಷ ವಿಭಾಗದಲ್ಲಿ ವಿಬಿನ್ ಪೂಜಾರಿ ಪ್ರಥಮ ಪ್ರಶಸ್ತಿಯನ್ನು ಪಡೆದಿದ್ದಾರೆ. ಇವರು ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದಾರೆ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ .









