ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ – ಶೈಕ್ಷಣಿಕ ಸಾಧನೆಗಾಗಿ ಒಂದು ಲಕ್ಷ ಮೊತ್ತದ ಸ್ಕಾಲರ್ಶಿಪ್ – ಕಾಲೇಜಿನ ಮೇಘಾ ಪೂಜಾರಿ ಮತ್ತು ಚಿನ್ಮಯಿ ವಿ ಆಯ್ಕೆ

0

ಉಜಿರೆ,ದಿ.ಮಾ.26 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ Quest Global ಸಂಸ್ಥೆಯು ಕೊಡಮಾಡುವ ಒಂದು ಲಕ್ಷ ಮೌಲ್ಯದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಗೊಂಡಿದ್ದಾರೆ.

ತೃತೀಯ ವರ್ಷದ ಇಸಿಇ(ECE) ವಿಭಾಗದ ಮೇಘಾ ಪೂಜಾರಿ ಮತ್ತು ದ್ವಿತೀಯ ವರ್ಷದ ಇಸಿಇ (ECE) ವಿಭಾಗದ ಚಿನ್ಮಯಿ ವಿ ತಮ್ಮ 2025-26 ನೇ ಸಾಲಿನ ಶೈಕ್ಷಣಿಕ ಸಾಧನೆ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿನ ಭರವಸೆಯ ಸಾಮರ್ಥ್ಯವನ್ನು ಗುರುತಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಮಾಡಲಾಗಿದೆ. ವಿದ್ಯಾರ್ಥಿಗಳು ತಲಾ 50,000 ದಂತೆ ವೇತನವನ್ನು ಪಡೆಯಲಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮೆರೆದಿರುವ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ , ವಿಭಾಗದ ಮುಖ್ಯಸ್ಥರು, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿ ಶುಭ ಹಾರೈಸಿರುತ್ತಾರೆ.

LEAVE A REPLY

Please enter your comment!
Please enter your name here