ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ವತಿಯಿಂದ ಅಭಿನಂದನಾ ಕಾರ್ಯಕ್ರಮ

0

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕರಿ ಸಂಘ ಇದರ ವತಿಯಿಂದ ಮಡಂತ್ಯಾರ್ ಗ್ರಾಮ ಪಂಚಾಯತ್ ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರಿಗೆ ಅಭಿನಂದನಾ ಸಮಾರಂಭ ಮಾ.26 ರಂದು ನಡೆಯಿತು.

ಕಳೆದ ಐದು ವರ್ಷಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸದಸ್ಯರಾಗಿ ಸೇವೆ ಸಲ್ಲಿಸಿದ ಇವರನ್ನು ಗುರುತಿಸಿ ಗೌರವಿಸಲಾಯಿತು. ಇವರೊಂದಿಗೆ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅಭಿವೃದ್ಧಿ ಅಧಿಕಾರಿಗಳನ್ನು ಗೌರವಿಸಲಾಯಿತು.

ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜೋಯಲ್ ಮೆಂಡೊನ್ಸಾ ಮಾತನಾಡಿ ಜನರಿಂದ ಚುನಾಯಿತರಾಗಿ ಜನರ ಸೇವೆಯನ್ನು ಸಲ್ಲಿಸಿ ಜನರ ಪ್ರೀತಿಗೆ ಪಾತ್ರರಾದ ತಮಗೆಲ್ಲರಿಗೂ ಅಭಿನಂದನೆಗಳು ಸಲ್ಲಿಸಿದರು.

ಉಪಾಧ್ಯಕ್ಷ ಕಾಂತಪ್ಪಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜ, ನಿರ್ದೇಶಕರಾದ ಗಣೇಶ್ ಮೂಲ್ಯ, ಮಹಾಬಳ, ಕಿಶೋರ್ ಕುಮಾರ್,, ಸುರೇಶ್ ಯಸ್ , ಗೋಪಾಲಕೃಷ್ಣ ಕೆ, ಧನಲಕ್ಷ್ಮಿ, ಅಮಿತಾ ಪ್ರಿಯಾ ಲೋಬೊ, ಹಾಗೂ ಪಂಚಾಯತ್ ಸಿಬ್ಬಂದಿ ವರ್ಗ, ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಸುರೇಶ ಯಸ್ ಕಾರ್ಯಕ್ರಮ ನಿರೂಪಿಸಿದರು ✍️ ವರದಿ.ಹರ್ಷ ಬಳ್ಳಮಂಜ

LEAVE A REPLY

Please enter your comment!
Please enter your name here