ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ (Soft skills) ಕಾರ್ಯಾಗಾರ

0

ಉಜಿರೆ, ಮಾರ್ಚ್ 26:ಉಜಿರೆಯ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿಗಾಗಿ ನಾಲ್ಕು ದಿನಗಳ “ಕೌಶಲ್ಯ ತರಬೇತಿ” (Soft skills) ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವು ಮಾರ್ಚ್ 23ರಿಂದ 26ರವರೆಗೆ ನಡೆಯಿತು.ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ ಆಯೋಜಿಸಲಾದ ಈ ಕಾರ್ಯಾಗಾರದಲ್ಲಿ ಬೆಂಗಳೂರಿನ ಡಿಲೈಟ್ ಸಂಸ್ಥೆಯ ಕಸ್ಟಮರ್ ಸಕ್ಸಸ್ ಲೀಡ್ ಅಧಿಕಾರಿ‌ ಕು. ಧನ್ಯಾ ಬಂಗೇರ ಅವರು ತರಬೇತಿ ನೀಡಿದರು.

ಕಾರ್ಯಾಗಾರದಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ಹಾಗೂ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗಗಳ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದರು.

ನಾಯಕತ್ವ ಗುಣಗಳು, ತಂಡದಲ್ಲಿ ಕೆಲಸ ಮಾಡುವ ವಿಧಾನ, ಸಂದರ್ಶನವನ್ನು ಹೇಗೆ ಎದುರಿಸಬೇಕು, ಸಂವಹನ ಕೌಶಲ್ಯಗಳು, ಗುಂಪು ಚರ್ಚೆಯಲ್ಲಿ ಹೇಗೆ ಮಾತನಾಡಬೇಕು ಎಂಬಂತಹ ವಿಷಯಗಳ ಕುರಿತು ಪ್ರಾಯೋಗಿಕ ಹಾಗೂ ಸಂವಹನಾತ್ಮಕ ತರಬೇತಿಯನ್ನು ನೀಡಲಾಯಿತು. ವಿದ್ಯಾರ್ಥಿಗಳು ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡು ಭವಿಷ್ಯದ ಉದ್ಯೋಗಾವಕಾಶಗಳಿಗೆ ಸಜ್ಜಾಗುವಂತೆ ನೆರವಾಗಲು ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

LEAVE A REPLY

Please enter your comment!
Please enter your name here