






ಧರ್ಮಸ್ಥಳ: ದಕ್ಷಿಣ ಅಯೋಧ್ಯೆ ಎಂದೇ ಪ್ರಸಿದ್ಧವಾಗಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ವರ್ಷದ ಉತ್ಸವಗಳು ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿವೆ.


ಇಂದು ಸಂಜೆ 7:00 ಗಂಟೆಗೆ ಭವ್ಯವಾದ ಬ್ರಹ್ಮರಥೋತ್ಸವ ಜರುಗಲಿದೆ. ಕ್ಷೇತ್ರದ ರಕ್ಷಕ ದೈವಗಳಾದ ಶ್ರೀ ರಕ್ತೇಶ್ವರಿ ಮತ್ತು ಶ್ರೀ ಗುಳಿಗ ದೈವಗಳಿಗೆ ವೈಭವದ ನೇಮೋತ್ಸವ ನಡೆಯಲಿದೆ. ರಥೋತ್ಸವದ ಅಂಗವಾಗಿ ವಿವಿಧ ಭಜನಾ ಮಂಡಳಿಗಳಿಂದ ಸಂಕೀರ್ತನೆ ಮತ್ತು ಸಾಂಸ್ಕೃತಿಕ ವೈಭವಗಳು ಜರುಗಲಿವೆ.









