ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಸ್ವೀಕರಿಸಿದ ಉಮಾ ಡಿ ಗೌಡ ಹಟ್ಟತ್ತೋಡಿ ಅವರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

0

ಗುರುವಾಯನಕೆರೆ: ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ಭಾಜನರಾದ ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ, ಮುಖ್ಯ ಶಿಕ್ಷಕರ ಸಂಘದ ನಿರ್ದೇಶಕಿ ಉಮಾ ಡಿ ಗೌಡ ಹಟ್ಟತ್ತೋಡಿ ಅವರನ್ನು ಮಾ.27ರಂದು ನಡೆದ ಮುಖ್ಯ ಶಿಕ್ಷಕರ ಸಂಘದ ವತಿಯಿಂದ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ಪದಾಧಿಕಾರಿಗಳು, ನಿರ್ದೇಶಕರುಗಳು, ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  ಕಾರ್ಯಕ್ರಮವು ತಾಲೂಕು ಘಟಕದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಸುರೇಶ್ ಎನ್. ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷ  ಭಾಸ್ಕರ್ ಪ್ರಸ್ತಾವನೆಗೈದರು. ಸಂಘಟನಾ ಕಾರ್ಯದರ್ಶಿ ಶಿವಸ್ವಾಮಿ ಎ.ಎಸ್. ವಂದಿಸಿದರು.

LEAVE A REPLY

Please enter your comment!
Please enter your name here