ಧರ್ಮಸ್ಥಳ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಚುನಾವಣೆ ಬಹಿಷ್ಕಾರ: ಗ್ರಾಮಸ್ಥರ ಆಕ್ರೋಶ

0

ಧರ್ಮಸ್ಥಳ: ಮೂಲಸೌಕರ್ಯಗಳ ಕೊರತೆಯಿಂದ ಬೇಸತ್ತಿರುವ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳಿಕಾರ್ ಗ್ರಾಮಸ್ಥರು ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಮುಳಿಕ್ಕಾರು ಕೋಲ್ಪೆಯಿಂದ ನೆಲ್ಲಿಕಟ್ಟೆವರೆಗೆ ಸುಮಾರು ದಶಕಗಳಿಂದ ಬಾಕಿ ಉಳಿದಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸದ ಗ್ರಾಮ ಪಂಚಾಯತ್ ವಿರುದ್ಧ ಗ್ರಾಮಸ್ಥರು ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ.

ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಅಳವಡಿಸಲಾಗಿರುವ ಬ್ಯಾನರ್‌ನಲ್ಲಿ ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. “ರಸ್ತೆ ಇಲ್ಲದೆ ವೋಟು ಇಲ್ಲ” ಎಂಬ ಘೋಷಣೆಯೊಂದಿಗೆ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

LEAVE A REPLY

Please enter your comment!
Please enter your name here