







ಬೆಳ್ತಂಗಡಿ: ತಾಲೂಕಿನ ಕಾಪಿನಡ್ಕ ಸೇತುವೆಯ ಸಮೀಪ ಇಂದು ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಘಟನೆಯ ವಿವರ:
ಗುರುವಾಯನಕೆರೆ ಕಡೆಯಿಂದ ಸಂಚರಿಸುತ್ತಿದ್ದ ಕಾರು ಹಾಗೂ ಕಾಪಿನಡ್ಕ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ನಡುವೆ ಈ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ರಿಕ್ಷಾ ಮತ್ತು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಹಾಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.


ಆಸ್ಪತ್ರೆಗೆ ದಾಖಲು:
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ. ಗಾಯಾಳುಗಳ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಪ್ರಕ್ರಿಯೆ ನಡೆಯುತ್ತಿದೆ.









