







ಮೊಗ್ರು: ಇಲ್ಲಿನ ಮೊಗ್ರು ಗ್ರಾಮದ ಬರುಂಗುಡೇಲು ಸಮೀಪದ ಅರಣ್ಯ ಪ್ರದೇಶದಲ್ಲಿ ಏ.6 ರಂದು ಬೆಂಕಿ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.


ಅರಣ್ಯದ ಒಂದು ಭಾಗದಲ್ಲಿ ಕಾಣಿಸಿಕೊಂಡ ಬೆಂಕಿಯು ಕ್ಷಣಾರ್ಧದಲ್ಲಿ ಪಕ್ಕದ ಕಾಡಿಗೂ ವ್ಯಾಪಿಸಿದೆ. ಗಾಳಿಯ ವೇಗಕ್ಕೆ ಬೆಂಕಿ ಮತ್ತಷ್ಟು ಹರಡುತ್ತಿದ್ದು, ಅರಣ್ಯ ಸಂಪತ್ತು ನಾಶವಾಗುವ ಭೀತಿ ಎದುರಾಗಿದೆ. ಘಟನೆಯಿಂದಾಗಿ ಈಗಾಗಲೇ ಅಪಾರ ಪ್ರಮಾಣದ ಗಿಡಮರಗಳು ಬೆಂಕಿಗಾಹುತಿಯಾಗಿದ್ದು, ನಷ್ಟ ಉಂಟಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಗ್ರಾಮಸ್ಥರು ತಕ್ಷಣವೇ ಅರಣ್ಯ ಇಲಾಖೆ ಹಾಗೂ ನೆರೆಹೊರೆಯವರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಹಾಗೂ ಸ್ಥಳೀಯರು ಹರಸಾಹಸ ಪಟ್ಟು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.









