






ಬೆಳ್ತಂಗಡಿ: ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪದವಿಧರೇತರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಉಷಾ ವಿ ಅವರು ಮಾ.31 ರಂದು ಸೇವಾ ನಿವೃತ್ತಿ ಹೊಂದಿದ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಜಮೀರ್ ಸಹದಿ ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಆರತಿ, ಬೆಳ್ತಂಗಡಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ವಾರಿಜಾ, ಶಾಲಾ ಹಿರಿಯ ಶಿಕ್ಷಕರಾದ ಸೂರ್ಯನಾರಾಯಣ ಪಿ, ದಿನಕರ ನಾಯಕ್, ಸರಿಕಾ ಕುಮಾರಿ, ಎಸ್.ಡಿ.ಎಮ್.ಸಿ ಪದಾಧಿಕಾರಿಗಳು ಹಾಗೂ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದರು.


ಕಾರ್ಯಕ್ರಮದಲ್ಲಿ ಉಷಾ ಅವರ ದೀರ್ಘಕಾಲದ ಶೈಕ್ಷಣಿಕ ಸೇವೆ, ಶಿಸ್ತುಬದ್ಧ ಕಾರ್ಯನಿರ್ವಹಣೆ ಹಾಗೂ ವಿದ್ಯಾರ್ಥಿಗಳ ಅಭಿವೃದ್ಧಿಗೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಲಾಯಿತು. ಶಿಕ್ಷಕ ಬಂಧುಗಳ ಪರವಾಗಿ ಅವರನ್ನು ಸನ್ಮಾನಿಸಲಾಯಿತು.
ಹಿರಿಯ ಶಿಕ್ಷಕ ಶಿವಾನಂದ ಭಂಡಾರಿ ಸ್ವಾಗತಿಸಿ, ಸಹಶಿಕ್ಷಕ ರಾಜೇಶ್ ಕಾರ್ಯಕ್ರಮ ನಿರೂಪಿಸಿ, ವಿಘ್ನೇಶ್ ಆಚಾರ್ಯ ಕಾರ್ಯಕ್ರಮದ ಚಿತ್ರೀಕರಣಮಾಡಿ, ಟಿ.ಜಿ.ಟಿ ಶಿಕ್ಷಕಿ ವಿದ್ಯಾ ಶೆಣೈ ಧನ್ಯವಾದವಿತ್ತರು.









