ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಪ್ರಥಮ; ಭಾರತವನ್ನು ಪ್ರತಿನಿಧಿಸಿದ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿ ಮಾರುತಿ

0

ಉಜಿರೆ, ದಿ. ಏ. 07 : ಯೂತ್ ಗೇಮ್ಸ್ ಫೌಂಡೇಶನ್ ಇಂಡಿಯಾ (YGF) ನೇಪಾಳ ಪೋಖರಾ ನಗರದ ರಂಗಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಇಂಡೋ-ನೇಪಾಳ ಅಂತಾರಾಷ್ಟ್ರೀಯ ಮಟ್ಟದ ಯೂತ್ ಗೇಮ್ಸ್ ನಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಾಗು ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿ ಮಾರುತಿ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಭಾರತ ದೇಶವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಾಂಪಿಯನ್ ಆಗಿರುವ ಪ್ರಥಮ ವರ್ಷದ ಬಿಎ ವಿದ್ಯಾರ್ಥಿ ಮಾರುತಿ, ಇತ್ತೀಚೆಗೆ ಯೂತ್ ಗೇಮ್ಸ್ ಕೌನ್ಸಿಲ್ ಆಫ್ ಇಂಡಿಯಾ (YGCI) ದೆಹಲಿಯ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಓಪನ್ ಯೂತ್ ಗೇಮ್ಸ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು.

ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ ಪೂಂಜ ತರಬೇತಿಯನ್ನು ನೀಡಿರುತ್ತಾರೆ.ಈ ಕ್ರೀಡಾ ಕೂಟದಲ್ಲಿ ಒಟ್ಟು 7 ಮಂದಿ ಭಾರತದ ಕ್ರೀಡಾಪಟುಗಳು ಭಾಗವಹಿಸಿದ್ದರು. ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಬಹುಮಾನ ವಿತರಣಾ ಸಮಾರಂಭದಲ್ಲಿ ಯೂತ್ ಗೇಮ್ಸ್ ಫೌಂಡೇಶನ್ ಸಮಿತಿಯ ಕಾರ್ಯದರ್ಶಿ ಅಮರ್‌ಸಿಂಗ್ ಚಂದೇಲೆ ಹಾಗೂ ಭಾರತೀಯ ಸೇನೆಯ ಹರೇಂದ್ರಸಿಂಗ್ ಚೌಧರಿ ಅವರು ಪದಕಗಳನ್ನು ನೀಡಿ ಅಭಿನಂದಿಸಿದರು.

ಈ ವಿಶೇಷ ಸಾಧನೆಗೈದು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ವಿದ್ಯಾರ್ಥಿಗೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ, ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ಶಾರದಾ, ಸಂದೇಶ್ ಬಿ ಪೂಂಜ, ಸುದೀನ್ ಪುಜಾರಿ, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here