







ಕೊಕ್ಕಡ: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕೊಕ್ಕಡದ ಸೈಂಟ್ ಫ್ರಾನ್ಸಿಸ್ ಪದವಿ ಪೂರ್ವ ಕಾಲೇಜು ಶೇಕಡಾ 100ರಷ್ಟು ಫಲಿತಾಂಶ ದಾಖಲಿಸಿ ಅಭೂತಪೂರ್ವ ಸಾಧನೆ ಮಾಡಿದೆ.
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಒಟ್ಟು 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ (Distinction) ಮತ್ತು 14 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.


ವಿಭಾಗವಾರು ಸಾಧಕರು:ವಿಜ್ಞಾನ ವಿಭಾಗ: ಯೋಶಿತಾ ಅವರು 575 (95.83%) ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ ಗಳಿಸಿದರೆ, ತೃಪ್ತಿ 568 (94.66%) ಅಂಕಗಳೊಂದಿಗೆ ದ್ವಿತೀಯ ಹಾಗೂ ಚೈತನ್ಯ 563 (93.83%) ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.ವಾಣಿಜ್ಯ ವಿಭಾಗ: ಬ್ಲೆಸ್ಟಿನ್ ಅವರು 561 (93.5%) ಅಂಕಗಳನ್ನು ಗಳಿಸಿ ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಕಾಲೇಜು ಸಂಚಾಲಕರಾದ ಫಾ.ಜಿಬಿನ್ ಬೋಬಿ, ಪ್ರಾಂಶುಪಾಲರಾದ ಭಗಿನಿ ಪವಿತ್ರಾ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗ, ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿ ಪೋಷಕರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.









