







ಬೆಳ್ತಂಗಡಿ: ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಿಂದೂ ವಿದ್ಯಾರ್ಥಿನಿಯರೊಂದಿಗೆ ಆಗಮಿಸಿದ್ದ ಮುಸ್ಲಿಂ ಬಾಲಕನನ್ನು ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣಾ ಪೊಲೀಸರು ಉಜಿರೆ ಗ್ರಾಮದ ಪೆರ್ಲ ನಿವಾಸಿ ರಮೇಶ್ ಪೂಜಾರಿ (೪೩) ಹಾಗೂ ನಡ ಗ್ರಾಮದ ಸುರ್ಯ ನಿವಾಸಿ ಗೌರವ್ ಶೆಟ್ಟಿ (೨೫) ಎಂಬವರನ್ನು ಬಂಧಿಸಿದ್ದಾರೆ.


ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ತನ್ನ ಸಹಪಾಠಿಗಳಾಗಿರುವ ಹಿಂದೂ ವಿದ್ಯಾರ್ಥಿನಿಯರೊಂದಿಗೆ ಭೇಟಿ ನೀಡಿದ್ದ ಉಜಿರೆಯ ಖಾಸಗಿ ವಿದ್ಯಾ ಸಂಸ್ಥೆಯ ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರಾದ ಗೌರವ್ ಶೆಟ್ಟಿ ಹಾಗೂ ರಮೇಶ್ ಅವರು ಇತರರೊಂದಿಗೆ ಸೇರಿ ಹಲ್ಲೆ ನಡೆಸಿದ್ದಾರೆ.
ವಿದ್ಯಾರ್ಥಿಯನ್ನು ಅಪಹರಿಸಿ ಹಲ್ಲೆ ನಡೆಸಿ ಬೆದರಿಕೆ ಒಡ್ಡಿದ್ದಾರೆ ಎಂದು ಸಂತ್ರಸ್ತ ಯುವಕನ ತಂದೆ ನೀಡಿದ್ದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದ ಬೆಳ್ತಂಗಡಿ ಠಾಣಾ ಪೊಲೀಸರು ಬಳಿಕ ಕಾರ್ಯಾಚರಣೆ ನಡೆಸಿ ರಮೇಶ್ ಪೂಜಾರಿ ಮತ್ತು ಗೌರವ್ ಶೆಟ್ಟಿ ಅವರನ್ನು ಬಂಧಿಸಿದ್ದರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ವೇಳೆ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ವಾದಿಸಿದ್ದರು.









