ಜ್ಯೋತಿ ಆಸ್ಪತ್ರೆಯಲ್ಲಿ ಒಂದೇ ದಿನ ಮೂರು ಯಶಸ್ವಿ ಲ್ಯಾಪರೋಸ್ಕೋಪಿ ಶಸ್ತ್ರಚಿಕಿತ್ಸೆ!

0

ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಜ್ಯೋತಿ ಆಸ್ಪತ್ರೆಯು ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸಿದೆ. ಏ.9 ರಂದು ಆಸ್ಪತ್ರೆಯ ಇತಿಹಾಸದಲ್ಲೇ ಮೊದಲ ಬಾರಿಗೆ, ಒಂದೇ ದಿನದಲ್ಲಿ ಮೂರು ಲ್ಯಾಪರೋಸ್ಕೋಪಿ (Laparoscopy) ಶಸ್ತ್ರಚಿಕಿತ್ಸೆಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.

ಈ ಸಂಕೀರ್ಣ ಮತ್ತು ಅತ್ಯಾಧುನಿಕ ಶಸ್ತ್ರಚಿಕಿತ್ಸೆಗಳನ್ನು ಅನುಭವಿ ಶಸ್ತ್ರಚಿಕಿತ್ಸಕರಾದ ಡಾ. ಸಿಸ್ಟರ್ ಅನುಜಾ (ಡಾ. ಸಿಸ್ಟರ್ ಬೆಟ್ಟಿ ವರ್ಗೀಸ್) ಅವರು ಯಶಸ್ವಿಯಾಗಿ ನೆರವೇರಿಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ಅರಿವಳಿಕೆ ತಜ್ಞರಾದ ಡಾ. ಚೈತ್ರಾ ಆರ್. ಅವರು ಪ್ರಮುಖ ಪಾತ್ರ ವಹಿಸಿದ್ದರು.

LEAVE A REPLY

Please enter your comment!
Please enter your name here