ಬೆಳ್ತಂಗಡಿಯ 9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

0

ಬೆಳ್ತಂಗಡಿ. ಏಕನಿವೇಶನ ಹಾಗೂ 9/11 ಅರ್ಜಿಗಳನ್ನು ದೀರ್ಘಕಾಲದಲ್ಲಿ ಕಚೇರಿಗಳಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಕ್ತವಾದ ದೂರಿನ ಬಗ್ಗೆ ಏ.10 ರಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಈ ಸಮಸ್ಯೆ ಬಗ್ಗೆ ಗಮನವನ್ನು ಸೆಳೆದರು.

ಸಚಿವರು ಕೂಡಲೇ ಅಧಿಕಾರಿಗಳೊಂದಿಗೆ ಈ ಸಮಸ್ಯೆ ಬಗ್ಗೆ ಚರ್ಚಿಸಿ ಪ್ರಸ್ತುತ ತಾಲೂಕಿಗೆ ಅಧಿಕಾರಿಗಳು ಒಂದು ದಿನ ಮಾತ್ರ ಭೇಟಿ ನೀಡುತ್ತಿದ್ದು. ಮುಂದಿನ ದಿನಗಳಲ್ಲಿ ಮೂರು ದಿನ ತಾಲೂಕಿಗೆ ಅಧಿಕಾರಿಗಳು ಭೇಟಿ ನೀಡಿ ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ. ಸೂಚಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರಾದ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಟ, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಾಫಿ ಕಾಶಿಪಟ್ಣ ಹಾಗೂ ದೇವಿ ಪ್ರಸಾದ್ ಶೆಟ್ಟಿ ಅಳದಂಗಡಿ, ಸುದರ್ಶನ್ ಮಂಜೀಲ ಆರಂಬೋಡಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here