ಪದ್ಮುಂಜ: ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಕಾರು; ಚಾಲಕ ಪ್ರಾಣಾಪಾಯದಿಂದ ಪಾರು

0

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಮರಿಗೆ ಬಿದ್ದ ಘಟನೆ ಇಲ್ಲಿನ ದಾರಂದಕುಕ್ಕು ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಪದ್ಮುಂಜ ನಿವಾಸಿ, ಪತ್ರಿಕಾ ಪ್ರತಿನಿಧಿ ಕಾಸಿಂ ಪದ್ಮುಂಜ ಅವರ ಪುತ್ರ ಮುಹಮ್ಮದ್ ಖಲಂದರ್ ಅಪಘಾತಕ್ಕೀಡಾದ ಕಾರಿನ ಚಾಲಕರು. ಇವರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ದಾರಂದಕುಕ್ಕು ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಕ್ಕೆ ಉರುಳಿದೆ.

ಘಟನೆಯಲ್ಲಿ ಚಾಲಕ ಮುಹಮ್ಮದ್ ಖಲಂದರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಕಾರಿಗೆ ಸಣ್ಣಪುಟ್ಟ ಹಾನಿಯಾಗಿದೆ ಎಂದು ತಿಳಿದುಬಂದಿದೆ

LEAVE A REPLY

Please enter your comment!
Please enter your name here