ಕರಾಯ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥ ಶೋಭಾಯಾತ್ರೆಗೆ ಚಾಲನೆ

0

ಬೆಳ್ತಂಗಡಿ: ಕರಾಯ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥದ ಶೋಭಾಯಾತ್ರೆ ಏ.13 ರಂದು ಶ್ರೀ ತನ್ನೋಜಿ ಮಹಾಲಿಂಗೇಶ್ವರ ದೇವಸ್ಥಾನ ಹಲೇಜಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕರಾಯಕ್ಕೆ ವೈಧಿಕ ವಿಧಿವಿಧಾನದೊಂದಿಗೆ ಬ್ರಹ್ಮರಥದ ಶೋಭಾಯಾತ್ರೆಗೆ ಬ್ರಹ್ಮಕಲಶೋತ್ಸವದ ಗೌರವಾಧ್ಯಕ್ಷರುಗಳಾದ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಹಾಗೂ ನಾಗಾರ್ಜುನ್ ರಾವ್ ಚಾಲನೆ ನೀಡಿದರು.

ಇದು ಐತಿಹಾಸಿಕ ಕಾರ್ಯಕ್ರಮವಾಗಿರುವುದರಿಂದ ಪೂರ್ಣಕುಂಭ ಸ್ವಾಗತದೊಂದಿಗೆ ವೀರಗಾಸೆ, ಕೇರಳ ತೈಯಮ್, ಡೊಳ್ಳು ಕುಣಿತ, ವಾಯಲಿನ್, ಚೆಂಡೆ, ಮತ್ತು ಒಂದು ಸಾವಿರ ಭಜಕರನ್ನೊಳಗೊಂಡ 50 ಭಜನಾ ತಂಡ, ಕೀಳು ಕುದುರೆ ವೈವಿಧ್ಯಮಯ ಸಿಡಿಮದ್ದು ಪ್ರದರ್ಶನಗೊಂಡಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಅತುಲ್ ಕುಮಾರ್ ಹಾಗೂ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ಕುಮಾರ್ ಕೆ ಹಲೇಜಿ ದೇವಸ್ಥಾನದ ಕಾರ್ಯಾಧ್ಯಕ್ಷ ಸುಧೀರ್ ಕೆ ಯನ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರ ಸುದರ್ಶನ್ ಕೊಲ್ಲಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಜಗದೀಶ್ ಮೈರ, ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣಿಕ್ಕರ, ಉಪ್ಪಿನಂಗಡಿ ಶ್ರೀರಾಮ ಶಾಲೆಯ ಅಧ್ಯಕ್ಷ ಸುನಿಲ್ ಅಣವು, ಸಂಚಾಲಕ ಪ್ರಭಾಕರ ಗೌಡ ಪೊಸಂದೊಡಿ, ಸಾಮ್ರಾಟ್ ಶಿವಗಿರಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here