






ಬೆಳ್ತಂಗಡಿ : 2026ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ 98.79% ಫಲಿತಾಂಶ ದಾಖಲಿಸುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದೆ. ಒಟ್ಟು 333 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿ 329 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 100 % ಕಲಾವಿಭಾಗದಲ್ಲಿ 98.73% ವಿಜ್ಞಾನ ವಿಭಾಗದಲ್ಲಿ 97.59% ಫಲಿತಾಂಶ ದಾಖಲಾಗಿದೆ.
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 92 ವಿದ್ಯಾರ್ಥಿಗಳಲ್ಲಿ 37 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದರೆ ಉಳಿದ 55 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 83 ವಿದ್ಯಾರ್ಥಿಗಳು ಹಾಜರಾಗಿ 27 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದರೆ ಉಳಿದ 54 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.


ಕಲಾವಿಭಾಗದಲ್ಲಿ 158 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 104 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 30 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕುಮಾರಿ ದೀಪಿಕಾ ಎಸ್ 586 ಅಂಕ ಕಾಲೇಜಿಗೆ ಮತ್ತು ವಾಣಿಜ್ಯ ವಿಭಾಗದ ಟಾಪರ್ ಆಗಿದ್ದಾಳೆ. ಕುಮಾರ ಶ್ರೇಯ 583 ಅಂಕ ಕಾಲೇಜಿಗೆ ಹಾಗೂ ವಾಣಿಜ್ಯ ವಿಭಾಗಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.
ಮೊಹಮ್ಮದ್ ಮುಬಿನ್ 578 ಅಂಕ ಪಡೆದು ಕಾಲೇಜಿಗೆ ಹಾಗೂ ವಾಣಿಜ್ಯ ವಿಭಾಗಕ್ಕೆ ತೃತೀಯ ಸ್ಥಾನಿಯಾಗಿದ್ದಾರೆ. ಉಳಿದಂತೆ ಕಲಾ ವಿಭಾಗದಲ್ಲಿ ಕೀರ್ತನ 574 ಹಾಗೂ ವಿಜ್ಞಾನ ವಿಭಾಗದಲ್ಲಿ ಸಾಕ್ಷಿ 576 ಅಂಕ ಪಡೆಯುವ ಮೂಲಕ ಕ್ರಮವಾಗಿ ಕಲಾ ಮತ್ತು ವಿಜ್ಞಾನ ವಿಭಾಗದ ಟಾಪರ್ ಆಗಿದ್ದಾರೆ. ಹುಟ್ಟು 86 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿಯೂ 212 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿಯೂ 31 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿಯೂ ಉತ್ತೀರ್ಣ ರಾಗಿದ್ದಾರೆ.
ತಾಲೂಕಿನಲ್ಲಿ ಗರಿಷ್ಠ ವಿದ್ಯಾರ್ಥಿಗಳನ್ನು ಹೊಂದಿರುವ ಸರಕಾರಿ ಪದವಿ ಪೂರ್ವ ಕಾಲೇಜ್ ಆಗಿದ್ದರೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಮಾತ್ರವಲ್ಲ ತಮ್ಮ ವೈಯಕ್ತಿಕ ಅಂಕ ಗಳಿಕೆಯಲ್ಲಿಯೂ ಉನ್ನತ ಸಾಧನೆ ಮಾಡಿದ್ದಕ್ಕೆ ಪ್ರಾಂಶುಪಾಲರು ಕಾಲೇಜಿನ ಅಭಿವೃದ್ಧಿ ಮಂಡಳಿ , ಸುವರ್ಣ ಮಹೋತ್ಸವ ಸಮಿತಿಯವರು ಹಾಗೂ ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.









