







ಉಜಿರೆ: ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ಕಲಾವೈಭವ ತಂಡವು ಈ ವರ್ಷ ರಾಜ್ಯದ ವಿವಿಧ ಭಾಗಗಳಲ್ಲಿ 20 ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನಗಳನ್ನು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.


ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸಲು ಮತ್ತು ಪ್ರೋತ್ಸಾಹಿಸಲು, ಈ ವರ್ಷದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಅದರಂತೆ, 2025-26ನೇ ಸಾಲಿನ ನೃತ್ಯ, ಯಕ್ಷಗಾನ ಹಾಗೂ ರಂಗ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ವತಿಯಿಂದ ಸುಮಾರು ರೂ. 4.5 ಲಕ್ಷ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸೋನಿಯಾ ಯಶೋವರ್ಮ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ., ಕಲಾ ಕೇಂದ್ರದ ಸಂಯೋಜಕರಾದ ತೃಪ್ತ ಕುಮಾರ್ ಜೈನ್, ಡಾ. ನಾಗಣ್ಣ ಡಿ.ಎ ಹಾಗೂ ತರಬೇತುದಾರರು ಉಪಸ್ಥಿತರಿದ್ದರು.ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ಹುಟ್ಟಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೇರಣೆಯಾಯಿತು.









