







ಪುಂಜಾಲಕಟ್ಟೆ: ಸ್ಥಳೀಯ ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ಆವರಣದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ಸಭಾಭವನ ನಿರ್ಮಾಣಕ್ಕಾಗಿ ಶಾಸಕರು ತಮ್ಮ ವಿವೇಚನಾ ನಿಧಿಯಿಂದ 1.25 ಕೋಟಿ ರೂ. ಭಾರಿ ಅನುದಾನವನ್ನು ಮಂಜೂರು ಮಾಡಿದ್ದಾರೆ.


ಶಾಲೆಯಲ್ಲಿ ಸುಸಜ್ಜಿತ ಸಭಾಂಗಣದ ಕೊರತೆಯಿಂದಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಎದುರಾಗುತ್ತಿದ್ದ ಸಮಸ್ಯೆಗೆ ಈಗ ಪರಿಹಾರ ಸಿಕ್ಕಂತಾಗಿದೆ. ಹೊಸ ಸಭಾಭವನವು ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶಿಸಲು ಪೂರಕವಾಗಲಿದೆ.
ಕೆಪಿಎಸ್ ಕ್ಯಾಂಪಸ್ ಅನ್ನು ಮಾದರಿ ಶಾಲೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈ ಕ್ರಮವು ಮಹತ್ವದ ಹೆಜ್ಜೆಯಾಗಿದ್ದು, ಸುತ್ತಮುತ್ತಲಿನ ನೂರಾರು ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ.ಶಿಕ್ಷಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧತೆ ತೋರಿದ ಶಾಸಕರ ಕಾರ್ಯಕ್ಕೆ ಸ್ಥಳೀಯರು, ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿ, ಧನ್ಯವಾದಗಳನ್ನು ಅರ್ಪಿಸಿದ್ದಾರೆ.









