ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

0

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ಮೇ 4ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ (https://swdservices. karnataka.gov.in/Education Prestigious)ದಲ್ಲಿ ನೋಂದಾಯಿಸಬೇಕು. ನಂತರ ಅರ್ಜಿಯೊಂದಿಗೆ ದಾಖಲಾತಿಗಳನ್ನು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಮೇ 5ರ ಸಂಜೆ 5.30ರೊಳಗೆ ಸಲ್ಲಿಸಬೇಕು.ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ, ವಾಣಿ ಆಂಗ್ಲ ಮಾಧ್ಯಮ ಶಾಲೆ, ಹಳೇಕೋಟೆ ಬೆಳ್ತಂಗಡಿ ಇವು ಪ್ರತಿಷ್ಠಿತ ಶಾಲೆಗಳಾಗಿವೆ.

LEAVE A REPLY

Please enter your comment!
Please enter your name here