ಎರ್ಮಾಯಿ ಫಾಲ್ಸ್ ಕಾಡಿಗೆ ಕರೆದೊಯ್ದು ಬಾಲಕಿಯ ಅತ್ಯಾಚಾರ; ಇಬ್ಬರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

0

ಬೆಳ್ತಂಗಡಿ : ಇಬ್ಬರು ಯುವಕರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಘಟನೆ ನಡೆದಿದ್ದು, ಈ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ.16ರಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಬಗ್ಗೆ ಮನೆಯವರಿಗೆ ಬಾಲಕಿ ತಿಳಿಸಿದ್ದು ಅದರಂತೆ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಏ.17 ರಂದು ದೂರು ನೀಡಿದ್ದು ಅದರಂತೆ ಪೊಲೀಸರು ಪೋಕ್ಸ್‌ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾದ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿ ಗರ್ಡಾಡಿ ಗ್ರಾಮದ ನವನೀತ್(26) ನನ್ನು ಏ.18 ರಂದು ಸಂಜೆ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಈ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾದ ಓರ್ವ ಆರೋಪಿ ಕಡಿರುದ್ಯಾವರ ಗ್ರಾಮದ ಸುಮಂತ್ ಗೆ ಮೇ.10 ರಂದು ಮದುವೆ ಕಾರ್ಯಕ್ರಮ ನಿಗದಿಯಾಗಿತ್ತು ಎಂದು ತಿಳಿದು ಬಂದಿದೆ .

LEAVE A REPLY

Please enter your comment!
Please enter your name here