







ಬೆಳ್ತಂಗಡಿ: ಪೊಲೀಸ್ ಇಲಾಖೆಯಲ್ಲಿನ ತನ್ನ ದಕ್ಷ ಹಾಗೂ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರದ 2025-2026ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾಗಿರುವ ವಿಜಯ ಕುಮಾರ್ ರೈ ಅವರಿಗೆ ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಅವರ ಸಮಾಜಮುಖಿ ಸೇವೆ ಹಾಗೂ ವೃತ್ತಿಪರತೆಯನ್ನು ಗೌರವಿಸಿ ಟ್ರಸ್ಟ್ ವತಿಯಿಂದ ಅವರಿಗೆ ‘ಸಮಾಜ ರತ್ನ’ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು.


ವಿಜಯ ಕುಮಾರ್ ರೈ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸುತ್ತಿರುವ ನಿಷ್ಪಕ್ಷಪಾತ ಸೇವೆಯನ್ನು ಈ ಸಂದರ್ಭದಲ್ಲಿ ಶ್ಲಾಘಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ಸಿಖಂದರ್ ಪಾಷಾ ಡಿ.ಎನ್. ಭಾಗವಹಿಸಿ ಗೌರವ ಸೂಚಿಸಿದರು.
ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕದ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಸಂಚಾಲಕ ಜಗದೀಶ್ ಲಾಯಿಲ, ಸಹ ಸಂಚಾಲಕ ಶರತ್ ಕರಾಯ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ ಮತ್ತು ಕಾರ್ಯದರ್ಶಿ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದು ವಿಜಯ ಕುಮಾರ್ ರೈ ಅವರಿಗೆ ಅಭಿನಂದನೆ ಸಲ್ಲಿಸಿದರು.









