ಕಕ್ಕಿಂಜೆ ಸರಕಾರಿ ಪ್ರೌಢ ಶಾಲೆಗೆ ಎಸ್.ಎಸ್.ಎಲ್. ಸಿ. ಪರೀಕ್ಷೆಯಲ್ಲಿ ಶೇ.100% ಫಲಿತಾಂಶ

0

ಕಕ್ಕಿಂಜೆ; ಸರಕಾರಿ ಪ್ರೌಢಶಾಲೆ ಎಸ್.ಎಸ್.ಎಲ್. ಸಿ. ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶ ಬಂದಿದ್ದು, 60 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.

4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ 39 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 13 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 4 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಗುಣಮಟ್ಟದ ಫಲಿತಾಂಶದಲ್ಲಿ ” ಎ ” ಗ್ರೇಡ್ ಪಡೆದಿದ್ದಾರೆ. ಅತ್ಯಂತ ಹಿಂದುಳಿದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಾಗಿ ಇರುವ ಈ ಸಂಸ್ಥೆಯ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here