ಎಸ್ ಎಸ್ ಎಲ್ ಸಿ: ಬೆದ್ರಬೆಟ್ಟು ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಗೆ ಸತತ 7ನೇ ಬಾರಿ 100% ದಾಖಲೆಯ ಫಲಿತಾಂಶ

0

ಬಂಗಾಡಿ :2025-26 ನೇ ಶೈಕ್ಷಣಿಕ ವರ್ಷದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಬೆದ್ರಬೆಟ್ಟು ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಿಂದ 15 ಹುಡುಗಿಯರು,12 ಹುಡುಗರು ಒಟ್ಟು 27 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

27 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಉನ್ನತ ಶ್ರೇಣಿ,ಉಳಿದ 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ 100 ಶೇಕಡ ಫಲಿತಾಂಶವನ್ನು ದಾಖಲಿಸಿದ್ದಾರೆ. ಕುಮಾರಿ ಜಿ.ಕೆ ಶ್ರಾವ್ಯ ಇವರು 616 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ತರುಣ್.ಎಸ್ ಇವರು 609 ಅಂಕಗಳನ್ನು ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಶಾನಿಹಾಝ್ 602 ಅಂಕಗಳನ್ನು ಗಳಿಸಿ ಶಾಲೆಗೆ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

LEAVE A REPLY

Please enter your comment!
Please enter your name here