






ಚಾರ್ಮಾಡಿ :ಗಾಂಧಿನಗರ ಇಲ್ಲಿನ ಸಮೀಪದ ಪ್ರದೇಶವೊಂದರಲ್ಲಿ ಏ.23 ರಂದು ಸುರಿದ ಗಾಳಿ ಮಳೆಗೆ ಮೂರು ವಿದ್ಯುತ್ ಕಂಬಗಳು ಹಾಗೂ ಒಂದು ಟ್ರಾನ್ಸ್ಫಾರ್ಮರ್ ಪೆಟ್ಟಿಗೆ ಸಂಪೂರ್ಣವಾಗಿ ಹನಿಯಾಗಿದೆ.
ಈ ಘಟನೆಯಲ್ಲಿಬೈಕ್ ನಲ್ಲಿ ಚಲಾಯಿಸುತ್ತಿದ್ದ ಗ್ರಾಮ ಪಂಚಾಯತ್ ಸದಸ್ಯ ರಿಯಾಜ್ ಗಾಂಧಿನಗರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೈಕ್ ಸಂಪೂರ್ಣ ಹನಿಯಾಗಿದೆ ಈ ಅನಿರೀಕ್ಷಿತ ಅವಘಡದಲ್ಲಿ ರಸ್ತೆಯಲ್ಲಿದ್ದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದ ಪರಿಣಾಮವಾಗಿ ಈ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ.


ರಸ್ತೆಯಲ್ಲಿ ಚಲಿಸುತ್ತಿದ್ದ ರಿಯಾಜ್ ಅವರ ಬೈಕ್ಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಅವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದಾಗಿ ಆ ಭಾಗದಾದ್ಯಂತ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.
ಘಟನೆ ನಡೆದ ತಕ್ಷಣ ಮೆಸ್ಕಾಂ (MESCOM) ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಹೆಚ್ಚಿನ ನೆರವು ಅಥವಾ ದೂರುಗಳಿಗಾಗಿ ಸಾರ್ವಜನಿಕರು ತಕ್ಷಣವೇ 1912 ಸಹಾಯವಾಣಿಗೆ ಕರೆ ಮಾಡುವಂತೆ ತಿಳಿಸಲಾಗಿದೆ.
ಸಾರ್ವಜನಿಕರು ಮತ್ತು ಪಂಚಾಯತ್ ಸಿಬ್ಬಂದಿಗಳು, ಮಾಜಿ ಸದಸ್ಯರು ರಸ್ತೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.









