







ಉಜಿರೆ :ಶ್ರೀ ಶ್ರೀಧ. ಮ. ಅನುದಾನಿತ ಸೆಕೆಂಡರಿ ಶಾಲೆ ಉಜಿರೆ 2025. 26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 99.29% ಫಲಿತಾಂಶ ದಾಖಲಿಸಿದೆ ಪರೀಕ್ಷೆಗೆ ಒಟ್ಟು 140 ವಿದ್ಯಾರ್ಥಿಗಳು ಹಾಜರಾಗಿದ್ದರು. ಮೋಕ್ಷಿತ 604 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ.


ಅನನ್ಯ 593 ಅಂಕ ಪಡೆದು ದ್ವಿತೀಯ ಸ್ಥಾನವನ್ನು ನಿತೇಶ್ 587 ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ 30ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. 93 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ಒಬ್ಬ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ .









