






ಬೆಳ್ತಂಗಡಿ: ತಾಲೂಕು ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಪ್ರಬುದ್ಧ ಕಟ್ಟಡದ ಉದ್ಘಾಟನೆ ಏ.25 ರಂದು ಕೆಲ್ಲಗುತ್ತು ಅಚ್ಚನಡ್ಕ ಪ್ರದೇಶದಲ್ಲಿ ನಡೆಯಿತು.


ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ದೀಪ ಪ್ರಜ್ವಲನೆ ಮಾಡಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಿ ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ,ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಪುತ್ತೂರು ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ ತಿರುಮಲೇಶ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಡಾ.ಪ್ರಕಾಶ್ ಪ್ರಭು, ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷ ಅರ್ವಿನ್ ಡಿಸೋಜ, ಬೆಳ್ತಂಗಡಿ ಜೆಸಿಐ ಅಧ್ಯಕ್ಷ ಜಿತೇಶ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ್ ಬಿ, ತಾಲೂಕು ಮಹಿಳಾ ಒಕ್ಕೂಟದ ಸಂಘದ ಅಧ್ಯಕ್ಷ ಉಮಾ ಆರ್ ರಾವ್, ಬೆಳ್ತಂಗಡಿ ಮಾಜಿ ಸೈನಿಕ ಸಂಘದ ಅಧ್ಯಕ್ಷ ಮಹಮ್ಮದ್ ರಫಿಕ್ ಉಪಸ್ಥಿತರಿದ್ದರು.ಸ್ವಾಗತ ಸಮಿತಿಯ ಸಂಚಾಲಕ ಜೋಸೆಫ್ ಸ್ವಾಗತಿಸಿ, ವಸಂತ ಸುವರ್ಣ ಧನ್ಯವಾದವಿತ್ತರು.









