ಸಜೀಪಮುನ್ನೂರು ಮೂರ್ತೆದಾರರ ಸಹಕಾರಿ ಸಂಘದ 18ನೇ ಶಿರ್ತಾಡಿ ಶಾಖೆ ಮೇ 3 ರಂದು ಉದ್ಘಾಟನೆ

0

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಿರ್ತಾಡಿ ಶಾಖೆ, ಶಿರ್ತಾಡಿ ಮಕ್ಕಿ ಹೈಸ್ಕೂಲ್ ರಸ್ತೆಯಲ್ಲಿ ಮೇ 3 ರಂದು ಬೆಳಗ್ಗೆ 10ಕ್ಕೆ ಶುಭಾರಂಭಗೊಳ್ಳಲಿದೆ.18ನೇ ಶಿರ್ತಾಡಿ ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು.

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು.ಮೂಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ದೀಪ ಪ್ರಜ್ವಲಿಸುವರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭದ್ರತಾ ಕೋಶ ಉದ್ಘಾಟಿಸುವರು. ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಠೇವಣಿ ಪತ್ರ ಬಿಡುಗಡೆಗೊಳಿಸುವರು.

ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸೋಮನಾಥ ಶಾಂತಿ, ಮಾಜಿ ಅಧ್ಯಕ್ಷ ಪಿ.ಕೆ. ರಾಜು ಪೂಜಾರಿ ಕಾಶಿಪಟ್ನ, ಶಿರ್ತಾಡಿ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್, ಶಿರ್ತಾಡಿ ಗ್ರಾಪಂ ಮಾಜಿ ಅಧ್ಯಕ್ಷ ಫೆಡ್ರಿಕ್ ಪಿಂಟೋ, ನವ ಮೈತ್ರಿ ಸೌಹಾರ್ದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ವಿ. ಶೆಟ್ಟಿ, ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್, ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಕಟ್ಟಡದ ಮಾಲೀಕ ರತ್ನಾಕರ ಬುಣ್ಣನ್, ಮಹಮ್ಮದ್ ದೋಣಿಬಾಗಿಲು ಭಾಗವಹಿಸುವರು ಎಂದು ಅಧ್ಯಕ್ಷ ಕೆ. ಸಂಜೀವ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೊಸ ಕಟ್ಟಡ ನಿರ್ಮಾಣ: ಸಂಘದ ಪ್ರಧಾನ ಕಚೇರಿಗೆ ಸಜೀಪಮೂಡ ಗ್ರಾಮದ ಸುಭಾಷ್‌ನಗರದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಹಂತದಲ್ಲಿದೆ.ಸಂಘದ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ, ಉಪಾಧ್ಯಕ್ಷರಾಗಿ ವಿಠಲ ಚೇಳೂರು, ನಿರ್ದೇಶಕರಾಗಿ ಸುಂದರ ಪೂಜಾರಿ ಬೀಡಿನಪಾಲು, ರಮೇಶ್ ಅನ್ನಪ್ಪಾಡಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ್ ಕಾನ್ಸಾಲೆ. ಕೆ.ಸುಜಾತಾ ಎಂ., ವಾಣಿವಸಂತ, ಆಶಿಶ್ ಪೂಜಾರಿ, ಚಿದಾನಂದ ಎಂ. ಕಡೇಶ್ವಾಲ್ಯ, ಎಂ.ಕೆ.ಪ್ರಸಾದ್, ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಮಮತಾ ಜಿ. ಸಂಘವನ್ನು ಮುನ್ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here