8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಕೋರನ ಬಂಧನ

0

ಧರ್ಮಸ್ಥಳ: ಕಳೆದ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದರೋಡೆ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಬನಶಂಕರಿ ನಿವಾಸಿ ಮಣಿ ಅಲಿಯಾಸ್ ಮಣಿಕಂಠ (32) ಬಂಧಿತ ಆರೋಪಿ.2017ರಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣವೊಂದರಲ್ಲಿ (ಅ.ಕ್ರ: 65/2017 ಕಲಂ 397, 395 ಜೊತೆಗೆ 34 ಐಪಿಸಿ) ಈತ ಭಾಗಿಯಾಗಿದ್ದನು. ಪ್ರಕರಣ ದಾಖಲಾದ ನಂತರ ಈತ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಆರೋಪಿಯ ಸುಳಿವು ಪತ್ತೆಹಚ್ಚಿದ ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವೃಷಭ ಮತ್ತು ಚರಣ್ ರಾಜ್ ಅವರು ಬೆಂಗಳೂರಿಗೆ ತೆರಳಿ ಸತತ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.ಬಂಧಿತ ಆರೋಪಿಯನ್ನು ಇಂದು (ಏಪ್ರಿಲ್ 27) ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here