






ಬೆಳ್ತಂಗಡಿ: ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ‘ಮೈ ಭಾರತ್’ ದಕ್ಷಿಣ ಕನ್ನಡ ಜಿಲ್ಲೆ, ಮಲವಂತಿಗೆ ದಿಡುಪೆಯ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಮಲವಂತಿಗೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಯಿತು.


ಏಪ್ರಿಲ್ 30ರಂದು ನಡೆದ ಈ ವಿಶೇಷ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಅವರು ವಿಜೇತ ಕ್ರೀಡಾಪಟುಗಳಿಗೆ ಸಾಮಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ, ಮೈ ಭಾರತ್ ಜಿಲ್ಲಾ ಆಡಳಿತಾಧಿಕಾರಿ ಜಗದೀಶ್ ಕೆ., ಹಾಗೂ ತಾಲೂಕು ಪ್ರತಿನಿಧಿ ತೀಕ್ಷಿತ್ ಕೆ. ಕಲ್ಬೆಟ್ಟು ಉಪಸ್ಥಿತರಿದ್ದರು. ತೀಕ್ಷಿತ್ ಅವರು ಸ್ವಾಗತಿಸಿ ವಂದನಾರ್ಪಣೆ ಮಾಡಿದರು.ಗಣ್ಯರಾದ ಬೆಳ್ತಂಗಡಿಯ ವಕೀಲ ನಿಶಾಂಕ್ ಗೌಡ, ಸಂದೀಪ್ ಗೌಡ, ಮೋಹಿನಿ ಗಂಗಾಧರ ಗೌಡ ಸೇರಿದಂತೆ ಹಲವು ಗಣ್ಯರು ಹಾಗೂ ಕ್ರೀಡಾಪಟುಗಳು ಈ ಸಂದರ್ಭದಲ್ಲಿ ಭಾಗವಹಿಸಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.









