ರಕ್ಷಿತ್ ಶಿವರಾಂ ಮುತುವರ್ಜಿಗೆ ಅಭಿನಂದನೆ- ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲಾ

0

ಗುರುವಾಯನಕೆರೆ-ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ಶ್ರಮ*ತಾಲೂಕಿನ ಜನರ ಬಹುದಿನದ ಬೇಡಿಕೆಯಾಗಿದ್ದ ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 13 ಕೋಟಿ ರೂ. ಬಿಡುಗಡೆ ಮಾಡಿದ್ದು, ಇದಕ್ಕಾಗಿ ಖುದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಮಸ್ಯೆ ಕುರಿತು ಮನವಿ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಒತ್ತಾಯಿಸುವ ಮೂಲಕ ಜನತೆಯ ಸಂಕಷ್ಟ ನೀಗಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಕಾರ್ಯ ಸ್ಮರಣೀಯ.

ಬೆಂಗಳೂರಿನಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಮಗಾರಿಯನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆಯನ್ನು ರಾಜ್ಯ ಸರಕಾರ ನೀಡಿದೆ. ಧೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ, ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯರವರಿಗೆ, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಅಭಿನಂದನೆಗಳು.

ಈ ಹಿಂದೆ ಲೋಕೋಪಯೋಗಿ ಸಚಿವರು ಪುತ್ತೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಇದೇ ರಸ್ತೆಯಲ್ಲಿ ಕರೆದುಕೊಂಡು ಬಂದು ರಸ್ತೆಯ ವಾಸ್ತವ ಪರಿಸ್ಥಿತಿಯ ಬಗ್ಗೆ ಮತ್ತು ಅಗತ್ಯತೆ ಬಗ್ಗೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಂ ಮನವಿ ಮಾಡಿದ್ದರು. ಈ ಮೂಲಕ ಈ ರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ರಾಜ್ಯ ಹೆದ್ದಾರಿ ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರ, ಧರ್ಮಸ್ಥಳ, ವೇಣೂರು, ಉಪ್ಪಿನಂಗಡಿ, ಪುತ್ತೂರು ಮೊದಲಾದ ಕಡೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಾಗಿದ್ದು ಅನುಮೋದನೆ ಸಹಕರಿಸಿದ ಎಲ್ಲರಿಗೂ ಜಿಲ್ಲಾ ಕೆ ಡಿ ಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ಅವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here