







ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಿರ್ತಾಡಿ ಶಾಖೆ, ಶಿರ್ತಾಡಿ ಮಕ್ಕಿ ಹೈಸ್ಕೂಲ್ ರಸ್ತೆಯಲ್ಲಿ ಮೇ 3 ರಂದು ಉದ್ಘಾಟನೆಗೊಂಡಿದೆ.



18ನೇ ಶಿರ್ತಾಡಿ ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದರು ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯ ಮಾಜಿ ಅಧ್ಯಕ್ಷ ಪಿ.ಕೆ. ರಾಜು ಪೂಜಾರಿ ಕಾಶಿಪಟ್ನ ಠೇವಣಿ ಪತ್ರ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಅಶೋಕ್, ಶಿರ್ತಾಡಿ ಗ್ರಾಪಂ ಮಾಜಿ ಅಧ್ಯಕ್ಷ ಫೆಡ್ರಿಕ್ ಪಿಂಟೋ, ನವ ಮೈತ್ರಿ ಸೌಹಾರ್ದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ವಿ. ಶೆಟ್ಟಿ, ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಕಟ್ಟಡದ ಮಾಲೀಕ ರತ್ನಾಕರ ಬುಣ್ಣನ್, ಬೇಬಿ ಕುಂದರ್, ಮಹಮ್ಮದ್ ದೋಣಿಬಾಗಿಲು, ಸಂಘದ ಉಪಾಧ್ಯಕ್ಷ ವಿಠಲ ಚೇಳೂರು ಉಪಸ್ಥಿತರಿದ್ದರು.ಸಂಘದ ನಿರ್ದೇಶಕ ಎಮ್.ಕೆ ಪ್ರಸಾದ್ ಸ್ವಾಗತಿಸಿ, ಜಯಶಂಕರ್ ಕಾನ್ಸಾಲೆ ಧನ್ಯವಾದವಿತ್ತರು.









