






ಬೆಳಾಲು: ಇಲ್ಲಿನ ಪೇಟೆಯಲ್ಲಿ ಮೇ. 5ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.


ಮೃತ ವ್ಯಕ್ತಿಯು ವೃತ್ತಿಯಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೇ.5ರಂದು ಅವರು ಸಮೀಪದ ಅಂಗಡಿಯೊಂದಕ್ಕೆ ಬಂದು ಕೆಲಸ ಮುಗಿಸಿ ತಮ್ಮ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದಾಗ, ಹಿಂಬದಿಯಿಂದ ಬಂದ ಕ್ರೇನ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಸವಾರನು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.









