ಪಂಚ ರಾಜ್ಯಗಳ ಚುನಾವಣೆ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಜಯ – ಪಾಲೇದುವಿನಲ್ಲಿ ಕಾರ್ಯಕರ್ತರ ವಿಜಯೋತ್ಸವ

0

ತಣ್ಣೀರುಪಂಥ: ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ, ಅಧಿಕಾರದ ಚುಕ್ಕಾಣಿ ಹಿಡಿದ ಹಿನ್ನೆಲೆಯಲ್ಲಿ ತಣ್ಣೀರುಪಂಥ ಗ್ರಾಮದ ಪಾಲೇದುವಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಮೇ 4 ರಂದು ನಡೆದ ಈ ವಿಜಯೋತ್ಸವದಲ್ಲಿ ಪಾಲೇದು ಪರಿಸರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ, ಸಿಡಿಮದ್ದು ಸಿಡಿಸಿ ಹಾಗೂ ಜೈಕಾರದ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಸಂತಸ ಹಂಚಿಕೊಂಡರು. ಪರಸ್ಪರ ಸಿಹಿತಿಂಡಿ ಹಂಚಿ ಗೆಲುವನ್ನು ಸಂಭ್ರಮಿಸಿದರು.

ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರು, ಪ್ರಮುಖರಾದ ಚೇತನ್ ಸುವರ್ಣ ಅಳಕ್ಕೆ, ಅನಿಲ್ ಪಾಲೇದು, ರಾಜೇಶ್ ಕರಂಗೀಲು, ಹರೀಶ್ ಪ್ರಸಾದ್ ಬೋಲ್ಡೆಲ್, ಯತೀಶ್ ಪಾಲೇದು ಸೇರಿದಂತೆ ಹಲವಾರು ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here