








ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ರಾಜಾಜಿನಗರದ ನಿವಾಸಿ ಕಾವೇರಿ ಎಂಬವರು ನೀಡಿದ ಮಟ್ಟಣ್ಣನವರ್ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ೨೦೨೩ರ ಡಿಸೆಂಬರ್ ೪ರಂದು ಉಜಿರೆಯಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧಾರ್ಮಿಕ ಕ್ಷೇತ್ರದ ಬಗ್ಗೆ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಅವರು ಅವಹೇಳನ ಮಾಡಿದ್ದಾರೆ. ಈ ವಿಡಿಯೋ ಕುಡ್ಲ ರಾಂಪೇಜ್ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಿದೆ. ಪವಿತ್ರ ಧಾರ್ಮಿಕ ಕೇಂದ್ರದ ಬಗ್ಗೆ ಅಗೌರವಯುತವಾಗಿ ಮಾತನಾಡಿ ಧಾರ್ಮಿಕ ಭಾವನೆಗಳಿಗೆ ಗಿರೀಶ್ ಮಟ್ಟಣ್ಣವರ್ ಧಕ್ಕೆ ತಂದಿದ್ದಾರೆ ಎಂದು ಬೆಂಗಳೂರು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರಂಭದಲ್ಲಿ ಝೀರೋ ಎಫ್‌ಐಆರ್ ದಾಖಲಿಸಲಾಗಿದ್ದು ಮುಂದಿನ ಕಾನೂನು ಪ್ರಕ್ರಿಯೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆಯಲಿದೆ.








