







ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ 10ನೇ ತರಗತಿಯ ವಿದ್ಯಾರ್ಥಿಗಳಿಗೆ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶಿಕ್ಷಕ-ರಕ್ಷಕ ಸಭೆಯನ್ನು ಮೇ 18ರಂದು ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ವಿಜಯ ಕೆ ಇವರು ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಅಧ್ಯಯನದ ಪ್ರಗತಿ, ಹಾಜರಾತಿ, ಪರೀಕ್ಷೆ ತಯಾರಿ ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಪೋಷಕರ ಸಹಕಾರ ಅತ್ಯಂತ ಅಗತ್ಯವೆಂದು ತಿಳಿಸಿದರು.


ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋರವರು ವಿದ್ಯಾರ್ಥಿಗಳು ಮನೆಯಲ್ಲಿ ನಿಯಮಿತವಾಗಿ ಓದುವ ಅಭ್ಯಾಸ ಮಾಡಬೇಕು ಹಾಗೂ ಮುಂದಿನ ದಿನಗಳಲ್ಲಿ ನಡೆಯುವಂತಹ ಪರೀಕ್ಷೆಗೆ ಸೂಕ್ತ ರೀತಿಯಲ್ಲಿ ತಯಾರಾಗಬೇಕೆಂದು ಸಲಹೆ ನೀಡಿದರು ಹಾಗೂ ಸಂಸ್ಥೆಯ ಸಂಯೋಜಕ ಯಶವಂತ್ ಜಿ ನಾಯಕ್ ವಿದ್ಯಾರ್ಥಿಗಳ ಉತ್ತಮ ಶಿಕ್ಷಣ, ಶಿಸ್ತು ಮತ್ತು ಭವಿಷ್ಯ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವವೆಂದು ತಿಳಿಸಿದರು. ಇದರ ಜೊತೆಯಲ್ಲಿ ಪೋಷಕರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಸಭೆಯಲ್ಲಿ ಎಸ್ ಎಸ್ ಎಲ್ ಸಿ ಪೋಷಕರು, ಎಲ್ಲಾ ಶಿಕ್ಷಕ ವೃಂದ ಹಾಗೂ ಬೋಧಕೇತರ ವರ್ಗ ಉಪಸ್ಥಿತಿಯಲ್ಲಿದ್ದರು. ಸಂಸ್ಥೆಯ ಸಹ ಶಿಕ್ಷಕಿ ಲಿಧಿಯಾ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.









