







ಬೆಳ್ತಂಗಡಿ: ರೆಖ್ಯ ಗ್ರಾಮದ ದೇವಸದ ಸಂಬಂಧಿಕರ ಮನೆಗೆ ಆಗಮಿಸಿದ್ದ ನೆಲ್ಯಾಡಿ ಪಾಲೇತ್ತಾಡಿ ನಿವಾಸಿ ಅಶ್ವಿತ್ ಕುಮಾರ್ (37) ಅವರು ಮೇ 17ರಂದು ಸಂಜೆ 4.15ರ ಬಳಿಕ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.


ಅಶ್ವಿತ್ ಕುಮಾರ್ ಅವರು ಕಾಣೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ ಗಾಬರಿಗೊಂಡ ಕುಟುಂಬಸ್ಥರು ಸ್ಥಳೀಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಕಾರದೊಂದಿಗೆ ಸುತ್ತಮುತ್ತ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ.
ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನಾಪತ್ತೆಯಾದ ವ್ಯಕ್ತಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.









