ಗೇರುಕಟ್ಟೆ ಪ್ರೌಢ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಗೇರುಕಟ್ಟೆ: ಸರಕಾರಿ ಪ್ರೌಢಶಾಲೆಯ ಶಾಲಾ ಪ್ರಾರಂಭೋತ್ಸವ ಮತ್ತು ಪೋಷಕರ ಮಹಾಸಭೆ ಜೂ.1 ರಂದು ನಡೆಯಿತು.ಎಸ್.ಡಿ.ಎಂ ಸಿ ಯ ಉಪಾಧ್ಯಕ್ಷರಾದ ಗೋಪಾಲಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸಿಹಿಯನ್ನು ನೀಡಿ ಸ್ವಾಗತಿಸಲಾಯಿತು.ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಬಳಿಕ ನಡೆದ ಪೋಷಕರ ಮಹಾಸಭೆಯಲ್ಲಿ ಸಂಸ್ಥೆಯ ಉಪ ಪ್ರಾoಶುಪಾಲರಾದ ಜ್ಯೋತಿ ರವರು ಈ ಶೈಕ್ಷಣಿಕ ವರ್ಷದ ರೂಪರೇಷಗಳನ್ನು ನೀಡಿ ಶಾಲಾ ನಿಯಮಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.ಶಿಕ್ಷಕ ದಿನೇಶ್ ಇವರು ಕಾರ್ಯಕ್ರಮ ನಿರೂಪಿಸಿ ಶಿಕ್ಷಕಿ ರಮ್ಯಾ ವಂದಿಸಿದರು.

LEAVE A REPLY

Please enter your comment!
Please enter your name here