ಬದನಾಜೆ ಶಾಲಾ ಪ್ರಾರಂಭೋತ್ಸವ, ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ

0

ಉಜಿರೆ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯಲ್ಲಿ ಶಾಲಾ ಪ್ರಾರಂಭೋತ್ಸವ ಜೂ. 1ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಲಕ್ಶ್ಮೀ ಗ್ರೂಪ್ ಮೋಹನ್ ಕುಮಾರ್ ಉದ್ಘಾಟಿಸಿದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಅನಿಲ್ ಡಿಸೋಜ, ನಿವೃತ್ತ ಮುಖ್ಯ ಶಿಕ್ಷಕರಾದ ಲಕ್ಷ್ಮಣ್ ಪೂಜಾರಿ, ನಿವೃತ್ತ ಶಿಕ್ಷಣ ಸಂಯೋಜಕ ಬಾಬು ಗೌಡ ಬಾಜಿಮಾರು, ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಯ್ಯ ಗೌಡ, ಸುಜ್ಞಾನ ನಿಧಿ ಯೋಜನೆಯ ಸಹ ಸಂಚಾಲಕ ಸೋಮಶೇಖರ್, ಸುಜ್ಞಾನ ನಿಧಿ ಯೋಜನೆಯ ಸಂಚಾಲಕ ಸುಂದರ್ ಬಂಗೇರ, ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಪಿತಾಂಬರ ಪೂಜಾರಿ, ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ನವೀನ, ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂಡಳಿಯ ಅಧ್ಯಕ್ಷ ಸನತ್ ಕುಮಾರ್, ಹಳೆಪೇಟೆ ಉಜಿರೆ ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ಪ್ರತಿಮಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಜಮುನಾ, ಬೆಳ್ತಂಗಡಿ ತಾಲೂಕು ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ನಿರಂಜನ್, ಮಾತೆಯರ ಸಂಘದ ಅಧ್ಯಕ್ಷೆ ವಿಮಲ ಗೌಡ ಉಪಸ್ಥಿತರಿದ್ದರು., ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಗೋಪಾಲ್ ಗೋಪಾಲ್ ಸ್ವಾಗತಿಸಿದರು. ದೈಹಿಕ ಶಿಕ್ಷಕ ನಿರಂಜನ್ ಪ್ರಸ್ತಾವಿಕ ನುಡಿಯಾಡಿದರು.

ಕೆಲವಾರು ವರ್ಷಗಳಿಂದ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ಬರಲು ಕಾರಣಕರ್ತರಾದ ಪ್ರೌಢ ಶಾಲಾ ಶಿಕ್ಷಕರನ್ನು , ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿ ನಿವೃತ್ತ ಮುಖ್ಯೋಪಾಧ್ಯಾಯ ಲಕ್ಷ್ಮಣ್ ಪೂಜಾರಿ ಇವರನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮವನ್ನು ಜಯಂತಿ ಕುಮಾರಿ ಸಹ ಶಿಕ್ಷಕಿ ನಡೆಸಿಕೊಟ್ಟರು ಸಹ ಶಿಕ್ಷಕಿ ಲಲಿತ ಕುಮಾರಿ, ಜಯಲಕ್ಷ್ಮಿ ಸಹ ಶಿಕ್ಷಕಿ ಕಾರ್ಯಕ್ರಮ ನಿರೂಪಿಸಿದರು . ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here