







ಬೆಳ್ತಂಗಡಿ: ಬೆಳ್ತಂಗಡಿಯಿಂದ ಧರ್ಮಸ್ಥಳದವರೆಗಿನ 33ಕೆವಿ ವಿದ್ಯುತ್ ಮಾರ್ಗಕ್ಕೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ತುರ್ತು ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.


ಈ ಹಿನ್ನೆಲೆಯಲ್ಲಿ ಜೂನ್ 4ರ ಗುರುವಾರದಂದು ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.ವಿದ್ಯುತ್ ಸ್ಥಗಿತಗೊಳ್ಳುವ ಪ್ರದೇಶಗಳು:ಧರ್ಮಸ್ಥಳ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಪಟ್ರಮೆ ಹಾಗೂ ಅರಸಿನಮಕ್ಕಿ ಫೀಡರ್ ವ್ಯಾಪ್ತಿಯ ಪ್ರದೇಶಗಳು.
ಗುರುವಾರ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 3:30ರ ವರೆಗೆ.ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಈ ಕಾಮಗಾರಿಗೆ ಸಹಕರಿಸಬೇಕಾಗಿ ಮೆಸ್ಕಾಂ ಅಧಿಕಾರಿಗಳು ವಿನಂತಿಸಿದ್ದಾರೆ.









