ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇವರ ಆಶ್ರಯದಲ್ಲಿ ಗರ್ಡಾಡಿ ಹಾಗೂ ಪಡಂಗಡಿ ಗ್ರಾಮದ ರೈತರಿಗೆ ರಿಯಾಯಿತಿ ದರದಲ್ಲಿ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

0

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇವರ ಆಶ್ರಯದಲ್ಲಿ, ಜೂ.4ರಂದು ಗರ್ಡಾಡಿ ಹಾಗೂ ಪಡಂಗಡಿ ಗ್ರಾಮದ ರೈತರಿಗೆ ರಿಯಾಯಿತಿ ದರದಲ್ಲಿ ಮೈಲು ತುತ್ತು ವಿತರಣೆ ಕಾರ್ಯಕ್ರಮ, ಹಾಗೂ ಸಂಘದ ವ್ಯಾಪ್ತಿಯ ಶಾಲೆಗಳ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮತ್ತು ಗ್ರಾಮೀಣ ಜನರಿಗೆ ಅನುಕೂಲವಾಗವಂತೆ ಸಂಘದ ಕಚೇರಿಯಲ್ಲಿ ಈ ಸ್ಟ್ಯಾಂಪ್ ಸೌಲಭ್ಯ ಕೇಂದ್ರವನ್ನು ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ, ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಜೈನ್, ಬ್ಯಾಂಕಿನ ಸಿಬ್ಬಂದಿ ವರ್ಗ ಹಾಗೂ ಗ್ರಾಮದ ವ್ಯಾಪ್ತಿಯ ಶಾಲೆಗಳ ಶಿಕ್ಷಕರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಎಲ್ಲರನ್ನೂ ಸ್ವಾಗತಿಸಿದರು. ಬ್ಯಾಂಕಿನ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಧನ್ಯವಾದ ನೀಡಿದರು.

LEAVE A REPLY

Please enter your comment!
Please enter your name here